ಸಿದ್ಧಾಪುರ: ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತೇಜನ ಶಿಬಿರ

ಕುಂದಾಪುರ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿದ್ಧಾಪುರದ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇ ಜೆಇಇ ಪ್ರವೇಶ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಓರಿಯಂಟೇಶನ್ ಕಾರ್ಯಕ್ರಮವು ಜುಲೈ 23ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜ್ಞಾನಸುಧಾ ಸಮೂಹ ಸಂಸ್ಥೆಗಳ ಡೀನ್-ಅಕಾಡೆಮಿಕ್ಸ್ ಡಾ. ಮಿಥುನ್ ಯು ಅವರು ಭಾಗವಹಿಸಿ, ಈ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ತಯಾರಿ ವಿಧಾನಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬಹುದಾದ ಅಭ್ಯಾಸ ಕ್ರಮಗಳ ಬಗ್ಗೆ ವಿಶ್ಲೇಷಣೆ ನೀಡಿದರು. ಉತ್ತಮ ಅಭ್ಯಾಸ ಹಾಗೂ ಸಮಯದ ನಿಜವಾದ ಬಳಕೆ ಮೂಲಕ ಯಶಸ್ಸು ಸಾಧ್ಯ ಎಂದರು.

ಸುಮುಖ ಎಜುಕೇಶನ್ ಟ್ರಸ್ಟ್‌‌ನ ಅಧ್ಯಕ್ಷರಾದ ಬಿ ಎಸ್ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಮತ್ತು ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಪ್ರಾಸಾವಿಸಿದರು. ರಸಾಯನಶಾಸ್ತ್ರ ಉಪನ್ಯಾಸಕ ಶಂಕರನಾರಾಯಣ ಉಪಾಧ್ಯಾಯ ನಿರೂಪಿಸಿದರು. ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ್ ಶೆಟ್ಟಿ ಸ್ವಾಗತಿಸಿದರು. ಉಪಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿದರು.

Leave a comment

Sign in to post your comment or sine up if you dont have any account.