ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸಿಎ,ಸಿಎಸ್ ಹಾಗೂ ಸಿಎಮ್ ಎ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ: ನಮ್ಮಲ್ಲಿರುವ ಸಮಯದ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಿಗಧಿತ ವೇಳಾಪಟ್ಟಿಯನ್ಬು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಆ ಮೂಲಕ ನಿರಂತರ ಅಭ್ಯಾಸದಿಂದ ಯಶಸ್ಸು ಗಳಿಸುವುದು ಸಾಧ್ಯ ಎಂದು ಸಿಎ ಮಹೀಂದ್ರ ಶೆಣೈ ಹೇಳಿದರು.
ಅವರು ಜುಲೈ 30ರಂದು ಸಿದ್ಧಾಪುರದ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಿಎ, ಸಿಎಸ್ ಹಾಗೂ ಸಿಎಮ್ಎ ಪ್ರವೇಶ ಪರೀಕ್ಷೆಗಳ ಕುರಿತು ಮಾರ್ಗದರ್ಶನ ನೀಡುವ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಸಿಎಸ್ ಸಂತೋಷ್ ಪ್ರಭು ಅವರು ಭಾಗವಹಿಸಿ, ಈ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ತಯಾರಿ ವಿಧಾನಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬಹುದಾದ ಅಭ್ಯಾಸ ಕ್ರಮಗಳ ಬಗ್ಗೆ ವಿಶ್ಲೇಷಣೆ ನೀಡಿದರು.
ಸುಮುಖ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಬಿ ಎಸ್ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಜಗದೀಶ್ ಸ್ವಾಗತಿಸಿದರು.
ಕಾಲೇಜಿನ ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಗಾಯತ್ರಿ ಸೋಮಯಾಜಿ ನಿರೂಪಿಸಿ, ನಾಗಶ್ರೀ ವಂದಿಸಿದರು.


